ಯೆಶಾಯ 65:14

ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 65

12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;

14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.

ಯೆಶಾಯ 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी