ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ