೨ ಅರಸುಗಳು 14:10

ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 14

8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.

9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.

11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.

೨ ಅರಸುಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी