ಅರಣ್ಯಕಾಂಡ 4:14

ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

12ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.

13ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ

14ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.

15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.

16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी