ಎಜ್ರನು 10:1

ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.

ಸಂದರ್ಭದೊಂದಿಗೆ ಓದಿ · ಎಜ್ರನು 10

1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.

2ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.

3ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.

ಎಜ್ರನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी