ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
14ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ