ನ್ಯಾಯಸ್ಥಾಪಕರು 11:36

ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.

35ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.

36ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.

37ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.

38ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी