ರೂತಳು 2:6

ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್‌ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.

ಸಂದರ್ಭದೊಂದಿಗೆ ಓದಿ · ರೂತಳು 2

4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.

5ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.

6ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್‌ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.

7ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.

8ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.

ರೂತಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी