ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
21ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ