ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.
32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ