ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
23ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ