ವಿಮೋಚನಕಾಂಡ 4:13

ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 4

11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.

13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.

14ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.

15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.

ವಿಮೋಚನಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी