ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ