ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ