ಯೆರೆಮಿಯ 51:21

ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.

20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;

21ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.

22ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.

23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी