ಮಲಾಕಿಯ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 4

1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी