ವಿಮೋಚನಕಾಂಡ 10:2

ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 10

1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.

2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.

3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.

ವಿಮೋಚನಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी