ವಿಮೋಚನಕಾಂಡ 34:21

ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.

20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.

21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.

22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.

23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी