ರೋಮಾಪುರದವರಿಗೆ 11:18

ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.

17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.

18ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.

19ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.

20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी