ಯೆಶಾಯ 34:13

ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 34

11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.

12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.

13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.

14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.

15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.

ಯೆಶಾಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी