ಮಾರ್ಕನು 10:37

ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.

36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು

37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.

38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.

39ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी