ಯೋಹಾನನು 21:23

ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 21

21ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.

2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.

24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.

25ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी