ಯೆರೆಮಿಯ 49:1

ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?

2ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.

3ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी