ಅಪೊಸ್ತಲರ ಕೃತ್ಯಗಳು 25:19

ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.

18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.

19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.

20ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.

21ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी