ಯೆಶಾಯ 44:10

ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?

ಸಂದರ್ಭದೊಂದಿಗೆ ಓದಿ · ಯೆಶಾಯ 44

8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.

9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.

10ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?

11ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.

12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी