ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
3ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
4ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
5ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
6ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
7ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ