ಯೆರೆಮಿಯ 50:28

ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.

27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.

28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!

29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.

30ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी