ಯೆಹೆಜ್ಕೇಲನು 10:3

ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 10

1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.

2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.

3ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.

4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.

ಯೆಹೆಜ್ಕೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी