ವಿಮೋಚನಕಾಂಡ 7:15

ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 7

13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.

15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು

16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.

17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

ವಿಮೋಚನಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी