ಯೆಶಾಯ 65:16

ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.

ಸಂದರ್ಭದೊಂದಿಗೆ ಓದಿ · ಯೆಶಾಯ 65

14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.

17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.

18ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.

ಯೆಶಾಯ 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी