ಅರಣ್ಯಕಾಂಡ 4:25

ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.

24ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--

25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ

26ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.

27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी