ಎಫೆಸದವರಿಗೆ 4:16

ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 4

14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.

15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.

16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.

17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.

ಎಫೆಸದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी