ಯೆಹೆಜ್ಕೇಲನು 17:4

ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

2ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.

3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.

4ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.

6ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी