ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
21ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ