೨ ಸಮುವೇಲನು 15:4

ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी