ಮಿಕ 3:10

ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

ಸಂದರ್ಭದೊಂದಿಗೆ ಓದಿ · ಮಿಕ 3

8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.

12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಮಿಕ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी