ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ