ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ