ಯೆಹೆಜ್ಕೇಲನು 44:4

ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

2ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.

3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.

4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.

5ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.

6ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी