೧ ಪೇತ್ರನು 4:3

ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 4

1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.

5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

೧ ಪೇತ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी