ಧರ್ಮೋಪದೇಶಕಾಂಡ 28:55

ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.

54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.

55ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.

56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ

57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी