ದಾನಿಯೇಲನು 4:12

ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 4

10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.

11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.

12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.

13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.

ದಾನಿಯೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी