೧ ಯೋಹಾನನು 2:9

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

7ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.

8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.

11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी