ವಿಮೋಚನಕಾಂಡ 3:17

ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.

16ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.

17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.

18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.

19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी