ಯೆಶಾಯ 46:5

ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?

ಸಂದರ್ಭದೊಂದಿಗೆ ಓದಿ · ಯೆಶಾಯ 46

3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--

4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.

5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?

6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

ಯೆಶಾಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी