ಪ್ರಕಟನೆ 3:16

ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 3

14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

16ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ

ಪ್ರಕಟನೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी