ಯೆರೆಮಿಯ 15:11

ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 15

9ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.

10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.

11ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?

12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.

ಯೆರೆಮಿಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी