೧ ಪೇತ್ರನು 1:9

ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 1

7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

9ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

10ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

೧ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी