ಮಿಕ 2:2

ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.

ಸಂದರ್ಭದೊಂದಿಗೆ ಓದಿ · ಮಿಕ 2

1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.

3ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.

4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.

ಮಿಕ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी