೧ ಅರಸುಗಳು 16:7

ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?

6ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.

7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.

8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.

9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी